ಕಲಬುರಗಿ : ಆಳಂದ ತಾಲೂಕಿನ ಭೂಸನೂರ ಗ್ರಾಮದ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ನಿನ್ನೆ ಚುನಾವಣೆ ನಡೆದಿದೆ.. ಚುನಾವಣೆಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಡಿ4 ರಂದು ಮಧ್ಯಾನ 12 ಗಂಟೆಗೆ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆದಿದೆ.. ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಪುತ್ರ ಹರ್ಷಾನಂದ ಗುತ್ತೇದಾರ್ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದು, ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮೂರು ದಿನಗಳ ಹಿಂದೆ ನಡೆದ ಜನತಾ ಬಜಾರ್ ಚುನಾವಣೆ ಬ್ಯಾಲೇಟ್ ಪೇಪರ್ ನೀಡಿದ್ದು, ಈ ಅಕ್ರಮ ಹಿಂದೆ ಶಾಸಕ ಬಿಆರ್ ಪಾಟೀಲ್ ಕೈವಾಡವಿದೆ ಅಂತಾ ಹರ್ಷಾನಂದ ಗುತ್ತೇದಾರ್ ಆರೋಪಿಸಿದ್ದಾರೆ.