ಬಳ್ಳಾರಿ: ನಗರದಲ್ಲಿ ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ಸಮಾಲೋಚನಾ ಸಭೆ
ಈ ಭಾಗದ ಕೈಗಾರಿಕೆ ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಬೇಕು. ಇದಕ್ಕೆ ಕೈಗಾರಿಕೆಗಳೂ ಸಹ ಕೈಜೋಡಿಸಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ ರಮಣ ರೆಡ್ಡಿ ಅವರು ಹೇಳಿದರು. ಸಂಡೂರು ತಾಲ್ಲೂಕಿನಲ್ಲಿ ಸ್ಕಿಲ್ ಪಾರ್ಕ್/ಅಕಾಡೆಮಿ ಸ್ಥಾಪಿಸುವ ಸಂಬಂಧ ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.