ಕಾರವಾರ: ಕೆಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಪಾರದರ್ಶಕತೆಗೆ ಮೊಬೈಲ್ ನಿಷೇಧ ಕಡ್ಡಾಯಗೊಳಿಸಿ ಕರಾವಳಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ನಗರದಲ್ಲಿ ಆಗ್ರಹ
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಗುರುವಾರ ಮಧ್ಯಾಹ್ನ 2ಕ್ಕೆ ಸುದ್ದಿಗೋಷ್ಠಿ ನಡೆಸಿದ ಕರಾವಳಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ಪಟಗಾರ ಅವರು ಜಿಲ್ಲೆಯ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾದ ಕೆಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಮತದಾನದ ವೇಳೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಬೇಕು ಒತ್ತಾಯಿಸಿದ್ದಾರೆ.