ಸಿಂಧನೂರು: ಸಿಂಧನೂರು : ಕೃಷಿ ಸಂಸ್ಕರಣಾ ಘಟಕ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೃಷಿ ಸಂಸ್ಕರಣೆ, ರೈತರ ತರಬೇತಿ ಕೇಂದ್ರ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಗುರುವಾರ 11 ಗಂಟೆ 30 ನಿಮಷಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ನಿರ್ಮಿಸಲಾದ ಘಟಕವನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಇಲಾಖೆಯ ಮುಖ್ಯ ಕಾರ್ಯದರ್ಶಿಳು, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.