ಜಗಳೂರು: ₹3.5 ಕೋಟಿ ವೆಚ್ಚದಲ್ಲಿ ಕೆರೆ ತಡೆಗೋಡೆ ಅಭಿವೃದ್ಧಿಗೆ ಪ್ರಸ್ತಾವ: ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಶಾಸಕ ಬಿ.ದೇವೇಂದ್ರಪ್ಪ ಭರವಸೆ
ಜಗಳೂರು ತಾಲ್ಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆತಿಯಿಂದ 'ನಮ್ಮ ಊರು ನಮ್ಮ ಕೆರೆ' ಯೋಜನೆಯಡಿ ಅಭಿವೃದ್ದಿಗೊಳಿಸಿದ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕ.ಬಿ.ದೇವೇಂದ್ರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ₹3.5 ಕೋಟಿ ವೆಚ್ಚದಲ್ಲಿ ಕೆರೆ ತಡೆಗೋಡೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮೊದಲ ಕಂತಿನಲ್ಲಿ ₹1.5 ಕೋಟಿ ಬಿಡುಗಡೆಯಾಗಿದೆ. ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.