ಚಿಕ್ಕಬಳ್ಳಾಪುರ: ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮ ಕಡ್ಡಾಯಕ್ಕೆ ಆಗ್ರಹ; ಡಿಸಿ ಕಚೇರಿ ಮುಂದೆ ಡಿಎಸ್‌ಎಸ್ ಧರಣಿ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಆದೇಶಿಸಬೇಕು ಎಂದು ಆಗ್ರಹಿಸಿ ಇಂದು ಶುಕ್ರವಾರ ಮಧ್ಯಾಹ್ನ 12:30 ಗಂಟೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆ ಪದಾಧಿಕಾರಿಗಳು ಪ್ರತಿಭಟನಾ ಧರಣಿ ನಡೆಸಿದರು.ಪ್ರತಿಭಟನಕಾರರನ್ನು ಉದ್ದೇಶಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ ವೆಂಕಟೇಶ್ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದು ಒಂದನೇ ಶರತ್ತಿನಲ್ಲಿ ಇದ್ದು ಇದು ಮೀಸಲಾತಿಗೆ ವ್ಯತಿರಿಕ್ತವಾಗಿ ಇದೆ ಎಂದರು