ಸರ್ವೆಯರ್ ಮೇಲೆ ಹಲ್ಲೆ; ಕ್ರಮಕ್ಕೆ ಸರ್ಕಾರಿ ನೌಕರರ ಸಂಘ ಆಗ್ರಹ ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಸರ್ವೆಗೆ ಸಂಬಂಧಿಸಿದಂತೆ ನೋಟಿಸ್ ನೀಡಲು ತೆರಳಿದ್ದ ಸಂದರ್ಭದಲ್ಲಿ ಸರ್ವೆಯರ್ ಚಂದ್ರಶೇಖರ್ ಎಂಬುವರ ಮೇಲೆ ಹಲ್ಲೆ ನಡೆಸಿರುವ ರಿಯಲ್ ಎಸ್ಟೇಟ್ ಮಧ್ಯವರ್ತಿ ಅಕ್ರಂ ಪಾಷ ಎಂಬುವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಅಜಯ್ ಕುಮಾರ್ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ತವ್ಯನಿರತ ನೌಕರರ ಮೇಲೆ ನಿರಂತರವಾಗಿ ಹಲ್ಲೆ,ದೌರ್ಜನ್ಯ ನಡೆಯುತ್ತಿದೆ. ಸಣ್ಣಪುಟ್ಟ ಕಾರಣಗಳಿಗಾಗಿ ಪದೇಪದೇ ನಡೆಯುತ್ತಿರುವ ಇಂಥ ಕೃತ್ಯಗಳನ್ನು ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ. ಇತ್ತಿಚೆಗೆ ನೌಕರ