ಬೆಳಗಾವಿ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ದಿಢೀರ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ರೈತರು
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ದಿಢೀರ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ರೈತರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಸಂಜೆ 4 ಗಂಟೆಯವರೆಗೆ ಸಮಯ ಕೇಳಿದ್ದರೂ, ಇದುವರೆಗೂ ಬಾರದ ಕಾರಣ, ಪ್ರತಿಭಟನಾಕಾರರು ದಿಢೀರ್ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಬೆಳಗಾವಿಯಲ್ಲಿ ಖಾಸಗಿ ಮಾರುಕಟ್ಟೆಯ ಕಟ್ಟಡದ ಅನುಮತಿ ರದ್ದುಪಡಿಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು