ತುಮಕೂರು: ಜಿಲ್ಲಾ ನ್ಯಾಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ನೇಮಕ :ನಗರದಲ್ಲಿ ಜಿಲ್ಲಾ ನ್ಯಾ. ಜಯಂತ್ ಕುಮಾರ್ ಅವರಿಂದ ಪ್ರಕಟಣೆ
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ ಕುಮಾರ್ ತಿಳಿಸಿದ್ದಾರೆ. ಅವರು ಸೋಮವಾರ ಸಂಜೆ ಸುಮಾರು 4 ರ ಸಮಯದಲ್ಲಿ ಮಾಧ್ಯಮ ಪ್ರಕಟಣೆಯನ್ನ ಹೊರಡಿಸಿದ್ದಾರೆ.ನ್ಯಾಯಾಂಗ ಘಟಕದ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಎಫ್ಟಿಎಸ್ಸಿ-1 ನ್ಯಾಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಬೆರಳಚ್ಚುಗಾರ, ಪರಿಚಾರಕ ಮತ್ತು ಸೇವಕ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ನ್ಯಾಯಾಂಗ ಇಲಾಖೆ ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.