ಕೊಪ್ಪಳ: ಅಕ್ರಮ ಆಸ್ತಿ ಗಳಿಸಿದ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಲೋಕಾಯುಕ್ತ ಅಧಿಕಾರಿಗಳು ನಗರ ಸಭೆಯ ಅಧಿಕಾರಿಗಳ ಕಚೇರಿ ಮನೆಯ ಮೇಲೆ ದಾಳಿ
Koppal, Koppal | Sep 16, 2025 ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಗುತ್ತಿಗೆದಾರ ಶಕೀಲ್ ಪಟೇಲ್ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳೆದ ವರ್ಷ ನಡೆದ 300ಕ್ಕೂ ಹೆಚ್ಚು ಕಾಮಗಾರಿಗಳಲ್ಲಿ ಸುಮಾರು ₹10 ಕೋಟಿಗೂ ಹೆಚ್ಚು ಭ್ರಷ್ಟಾಚಾರ ಆಗಿದೆ ಎನ್ನುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಲೋಕಾಯುಕ್ತಕ್ಕೂ ಕೆಲವರು ದೂರು ಸಲ್ಲಿಸಿದ್ದರು. ಮಂಗಳವಾರ ಬೆಳಿಗ್ಗೆಯಿಂದಲೇ ಲೋಕಾಯುಕ್ತ ಅಧಿಕಾರಿಗಳ ಒಂದು ತಂಡ ನಗರಸಭೆ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.