ಹುಬ್ಬಳ್ಳಿ: ತಮ್ಮ ಜೀವನದಲ್ಲಿ ಎದುರಾದ ಸವಾಲುಗಳನ್ನೇ ಸಾಧನೆಯ ಮೆಟ್ಟಿಲುಗಳನ್ನಾಗಿಸಿಕೊಂಡು ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಶ್ರಮಿಸಿದ ಡಾ. ಬಿ. ಆರ್. ಅಂಬೇಡ್ಕರ ರವರು ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹೇಳಿದರು. ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಚೇರಿಯಲ್ಲಿ ಆಯೋಜಿಸಿದ್ದ ಭರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಮಿಕ ಮುಖಂಡ ಹಾಗೂ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಗಂಗಾಧರ ಕಮಲದಿನ್ನಿ, ವಿಭಾಗೀಯ ಸಂಚಾರ ಅಧಿಕಾರಿ ವೈ.ಎಂ.ಶಿವರೆಡ್ಡಿ, ಲೆಕ್ಕಾಧಿಕಾರಿ ಮಹದೇವಸ್ವಾಮಿ, ಸ. ಅಂಕಿ ಸಂಖ್ಯಾಧಿಕಾರಿ ಅರುಣಕುಮಾರ ಮಾಡೊಳ್ಳಿ, ಅಧೀಕ್ಷಕ