ಬ್ಯಾಟರಾಯನಪುರ ವಿಭಾಗ ವ್ಯಾಪ್ತಿಯಲ್ಲಿನ ಜಕ್ಕೂರು ಉಪವಿಭಾಗದ ವಾರ್ಡ್ ಸಂಖ್ಯೆ 17 ರ ಜಕ್ಕೂರು ದಾಸರಹಳ್ಳಿ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ಹಾಲಿ ನಿರ್ಮಿಸಿರುವ ನೆಲ+1 ( ground +1 ) ಮಹಡಿಗಳ ಕಟ್ಟಡದ ಮೇಲೆ ಹೆಚ್ಚುವರಿಯಾಗಿ 2 ಅಂತಸ್ತು ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಕಟ್ಟಡದ 4ನೇ ಅಂತಸ್ತಿಗೆ ಯಾವುದೇ ಪರವಾನಿಗೆಯನ್ನು ಪಡೆಯದೇ ಅನಧಿಕೃತವಾಗಿ ನಿರ್ಮಿಸಲಾಗುತ್ತಿತ್ತು. ಇದನ್ನು ಪತ್ತೆ ಹಚ್ಚಿದ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ನೇತೃತ್ವದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತೆರವು ಕಾರ್ಯಾಚರಣೆಯನ್ನು ನಡೆಸಿದರು.