ಕಲಬುರಗಿ : ಆಳಂದ ವಿಧಾನಸಭೆ ಕ್ಷೇತ್ರದಲ್ಲಿ ವೋಟ್ ಚೋರಿ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಪುತ್ರ ಹರ್ಷಾನಂದ ಗುತ್ತೇದಾರ್ ಸೇರಿದಂತೆ ಏಳು ಜನರ ವಿರುದ್ಧ ಎಸ್ಐಟಿ ನ್ಯಾಯಾಲಯಕ್ಕೆ ಚಾರ್ಜ್ಶಿಟ್ ಸಲ್ಲಿಕೆ ಮಾಡಿದ್ದು, ಡಿ13 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ಲಭ್ಯವಾಗಿದೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಅಂತಾ ಶಾಸಕ ಬಿಆರ್ ಪಾಟೀಲ್ ಆರೋಪಿಸಿದ್ದರು.. ಹೀಗಾಗಿ ಈ ಬಗ್ಗೆ ತನಿಖೆ ನಡೆಸ್ತಿದ್ದ ಎಸ್ಐಟಿ ತನಿಖೆ ನಡೆಸಿ ಬೆಂಗಳೂರಿನ ACMM ಕೋರ್ಟ್ಗೆ ಚಾರ್ಜ್ಶಿಟ್ ಸಲ್ಲಿಸಿದೆ.