ಬಳ್ಳಾರಿ: ನಗರದಲ್ಲಿ ಪೋಲಿಸ್ , ಪತ್ರಕರ್ತರ ಕ್ರೀಡಾಕೂಟಕ್ಕೆ ಎಸ್ಪಿ ಶೋಭಾರಾಣಿ ಚಾಲನೆ
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 8ಗಂಟೆಗೆ ಪೊಲೀಸ್ ಮತ್ತು ಪತ್ರಕರ್ತರ ತಂಡಗಳ ಮಧ್ಯೆ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಚಾಲನೆ ಬ್ಯಾಟ್ ಬೀಸಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸರು ಮತ್ತು ಪತ್ರಕರ್ತರು ಕೆಲಸದ ಒತ್ತಡದ ಮಧ್ಯೆ ಕ್ರಿಕೆಟ್ ನಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ. ಸೋಲು ಗೆಲುವು ಸಾಮಾನ್ಯ ಉತ್ತಮ ಪ್ರದರ್ಶನ ನೀಡಬೇಕು ಎಂದು ಹೇಳಿದರು.