"ಬಿ. ಬಸವಲಿಂಗಪ್ಪನವರು ದಮನಿತರು, ಶೋಷಿತ ಸಮುದಾಯಗಳ ಬದುಕಿನ ದಿಕ್ಕನ್ನು ಬದಲಿಸಿದವರು, ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆ" ಎಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕರಾದ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಸೋಮವಾರ ಸಂಜೆ 5 ಗಮನಟೆ ಸುಮಾರಿಗೆ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33 ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು " ಬಿ. ಬಸವಲಿಂಗಪ್ಪನವರು ಕರ್ನಾಟಕ ಅಂಬೇಡ್ಕರ್ ಎನಿಸಿದ್ದವರು,