ಚನ್ನರಾಯಪಟ್ಟಣ: ಟ್ರಕ್ ಅಪಘಾತದ ಗಾಯಾಳುಗಳಿಗೆ ಸರ್ಕಾರವೇ ಚಿಕಿತ್ಸಾ ವೆಚ್ಚ ಬೆಳೆಸಲು ಹಿರಿಸಾವೆಯಲ್ಲಿ ಮಾಜಿ ಸಚಿವ ಸಿ ಟಿ ರವಿ ಆಗ್ರಹ
ಚನ್ನರಾಯಪಟ್ಟಣ : ಮೊಸಳೆ ಹೊಸಳ್ಳಿಯಲ್ಲಿ ಟ್ರಕ್ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಮಾನವೀಯತೆ ದೃಷ್ಟಿಯಿಂದ ಸರ್ಕಾರವೇ ಭರಿಸಬೇಕು ಎಂದು ಮಾಜಿ ಸಚಿವ ಸಿ ಟಿ ರವಿ ಒತ್ತಾಯಿಸಿದರು. ಹಿರಿಸಾವೆ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಗಾಯಾಳುಗಳ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು.ಮುಖ್ಯಮಂತ್ರಿಗಳಿಗೆ ವಿನಮ್ರ ಪೂರ್ವ ವಿನಂತಿ ಮಾಡುತ್ತೇನೆ, ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲು ನಾನು ಕೂಡ ಒತ್ತಡ ಹಾಕುತ್ತೇನೆ, ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಪ್ರದರ್ಶಿಸಿ ಎಂದು ಮನವಿ ಮಾಡಿದರು