ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ, ದರಸಗುಪ್ಪೆ ಬಳಿ ಸಿಡಿಎಸ್ ನಾಲೆ ಒಡೆದು ಬೆಳೆ ನಷ್ಟ
ಶ್ರೀರಂಗಪಟ್ಟಣ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ದರಸಗುಪ್ಪೆ ಗ್ರಾಮದ ಬಳಿ ಸಿಡಿಎಸ್ ನಾಲೆ ಏರಿ ಹೊಡೆದು ಗದ್ದೆಗೆ ನೀರು ನುಗ್ಗಿದ ಪರಿಣಾಮ ಅಪಾರ ನಷ್ಟ ಸಂಭವಿಸಿರುವುದು ತಡವಾಗಿ ವರದಿಯಾಗಿದೆ. ನಾಲೆ ಏರಿ ಒಡೆದು ರೈತರ ಜಮೀನಿಗೆ ನುಗ್ಗಿದ ನಾಲೆ ನೀರಿನಿಂದ ರೈತರ ಬೆಳೆಗಳು ಕೊಚ್ಚಿ ಹೋಗಿದೆ. ಕಬ್ಬು, ಭತ್ತ, ರಾಗಿ, ತೆಂಗು ಅಡಿಕೆ ಸೇರಿ ಹಲವು ಬೆಳೆಗಳು ನಾಶವಾಗಿವೆ. ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರಕ್ಕೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕಂದಾಯ, ನೀರಾವರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.