ಸಂಡೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಂಡೂರಿನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಬಂಧನ; ಪೋಕ್ಸೊ ಪ್ರಕರಣ ದಾಖಲು
ಸಂಡೂರು ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ನೀಡಿದ ಘಟನೆ ಈಚೆಗೆ ನಡೆದಿದೆ. ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ 58 ವರ್ಷದ ಜಂಬಣ್ಣ ಆರೋಪಿಯಾಗಿದ್ದು, ಇತನು ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ತಾಲ್ಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೋಮವಾರ ಮಧ್ಯಾಹ್ನ 2ಗಂಟೆಗೆ ಶಾಲೆಗೆ ಭೇಟಿ ನೀಡಿ, ಘಟನೆಯ ಬಗ್ಗೆ ಮಕ್ಕಳನ್ನು ವಿಚಾರಿಸಿದ್ದಾರೆ. ಮಕ್ಕಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಂಡೂರು ಠಾಣೆಯ ಪೊಲೀಸರು ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರ