ಚಳ್ಳಕೆರೆ ನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾನುವಾರ ಸಂಜೆ 4 ಗಂಟೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಚಳ್ಳಕೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮತ್ತು ಎ.ಪಿ.ಎಂ.ಸಿ ಮಾರ್ಕೆಟ್ ಬಳಿ ಇ.ಆರ್.ಎಸ್.ಎಸ್ -112 ಹೇಗೆ ಕರ್ತವ್ಯ ನಿರ್ವಹಿಸುತ್ತದೆ ಎಂದು ಹೊಯ್ಸಳ-08 ರ ಅಧಿಕಾರಿ ಮತ್ತು ಸಿಬ್ಬಂಧಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಿದ್ದು ಕಂಡು ಬಂದಿದ್ದು ಅಪರಾಧ ಪ್ರಖರಣಗಳ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು ಕಂಡು ಬಂದಿದೆ.