ಹೊಸನಗರ: ಅ.28 ರಂದು ಹೊಸನಗರದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೊಸನಗರ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಅ.28ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ ಎಂದು ಪ್ರಕಟಣೆ ಮೂಲಕ ಶುಕ್ರವಾರ ಅಧಿಕಾರಿಗಳು ತಿಳಿಸಿರುತ್ತಾರೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು,ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನ ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.