ಹುಬ್ಬಳ್ಳಿ: ನಗರದ ಗಬ್ಬೂರ ಬಳಿ ವಿದ್ಯುತ್ ಕಂಬವೊಂದು ಧಗಧಗನೆ ಹೊತ್ತಿ ಉರಿದಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಬೇಕಾಬಿಟ್ಟಿಯಾಗಿ ಚೆಲ್ಲಿದ ಕಸದಿಂದ ಹೊತ್ತಿಕೊಂಡ ಬೆಂಕಿ ಇಡೀ ವಿದ್ಯುತ್ ಕಂಬವನ್ನು ಆವರಿಸಿಕೊಂಡು ಉರಿಯುತ್ತಿದ್ದರೂ, ಅದನ್ನು ನಂದಿಸಲು ಯಾರೂ ಸ್ಥಳಕ್ಕೆ ಬಾರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ವಿದ್ಯುತ್ ಕಂಬಕ್ಕೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.