ರಾಯಚೂರು: ಅಸ್ಪೃಶ್ಯ ಅಲೆಮಾರಿ ಸಮುದಾಯಕ್ಕೆ ಶೇ.1 ಮೀಸಲಾತಿ ನೀಡಲು ನಗರದಲ್ಲಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ ಪ್ರತಿಭಟನೆ
ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಅವರ ವರದಿಯಂತೆ ರಾಜ್ಯದಲ್ಲಿರುವ ಅಸ್ಪೃಶ್ಯ ಸಂಬಂಧಿಸಿದ ಅಲೆಮಾರಿ ಸಮುದಾಯಕ್ಕೆ ಶೇಕಡ ಒಂದರಷ್ಟು ಮೀಸಲಾತಿಯನ್ನು ಘೋಷಿಸುವಂತೆ ಆಗ್ರಹಿಸಿ ರಾಯಚೂರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಬುಧವಾರ ಮಧ್ಯಾನ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಿ ಒತ್ತಾಯಿಸಲಾಯಿತು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ.