ಕಾರವಾರ: ಜೈಲಿನಲ್ಲೇ ರೌಡಿಗಳ ಅಟ್ಟಹಾಸ: ಖಾಕಿಗೇ ಕುತ್ತು ತಂದ ಮಾದಕ ವಸ್ತು! ನಗರದಲ್ಲಿ ಘಟನೆ
ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಜೈಲರ್ ಹಾಗೂ ಮೂವರು ಸಿಬ್ಬಂದಿಗಳ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಕಾರವಾರ ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಬೆಳಗ್ಗೆ 11.45ಕ್ಕೆ ಸಂಭವಿಸಿದೆ. ಮಂಗಳೂರು ಮೂಲದ ಕುಖ್ಯಾತ ರೌಡಿಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು