ಶಿವಮೊಗ್ಗ: ಜಿಲ್ಲಾ ಪಂಚಾಯತ್ ಸಿಇಒ ಲೋಖಂಡೆ ಸ್ನೇಹ ಸುಧಾಕರ್ ವರ್ಗಾವಣೆ, ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಎನ್. ಹೇಮಂತ್ ನೇಮಕ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ. ರಾಜ್ಯದ ಹಲವು ಐಎಎಸ್ ಅಧಿಕಾರಿಗಳನ್ನು ಇವತ್ತು ವರ್ಗಾವಣೆ ಮಾಡಲಾಗಿದೆ. ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಎನ್.ಹೇಮಂತ್ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾಯಿಸಲಾಗಿದೆ.