ಚಳ್ಳಕೆರೆ:-ಆಕಸ್ಮಿಕವಾಗಿ ಮಹಿಳೆಯೊಬ್ಬಳು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರೆಕಾಟ್ಲಾಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆ ಪ್ರಾಣ ಕಳೆದುಕೊಂಡಿದ್ದಾಳೆ ಎನ್ನಲಾಗಿದೆ ಭಾನುವಾರದಂದು ಈ ಘಟನೆ ನಡೆದಿದ್ದು ಸೋಮವಾರ ಬೆಳಗ್ಗೆ 8ಗಂಟೆಗೆ ಮೃತ ದೇಹ ಬಾವಿಯಲ್ಲಿ ತೇಲಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತ ಶವವನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಮೃತಳನ್ನು 38 ವರ್ಷದ ಅಲಮೇಲಮ್ಮ ಗಂಡ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.