ವಿಜಯಪುರ: ರೈತರಿಗೆ ಸಮರ್ಪಕ ಭೂ ಪರಿಹಾರ ನೀಡಬೇಕೆಂದು ರೈತ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಕೃಷ್ಣ ಮೇಲ್ದಂಡೆ ಮೂರನೇ ಹಂತದ ರೈತರುಗಳಿಗೆ ಸರ್ಕಾರ ಘೋಷಣೆ ಮಾಡಿರುವ ಭೂಪರಿಹಾರ ಸಮರ್ಪಕವಾಗಿಲ್ಲ. ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಕೇವಲ 30 ರಿಂದ 40ಲಕ್ಷ ರೂಪಾಯಿ ಪರಿಹಾರ ನೀಡುವ ಕೆಲಸ ಮಾಡುತ್ತಿದೆ ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ. ಪಲವತ್ತಾದ ಭೂಮಿ ಕಳೆದುಕೊಂಡ ರೈತರಿಗೆ ಕೇವಲ 40 ಲಕ್ಷ ರೂಪಾಯಿ ನೀಡುತ್ತಿರುವುದು ಸೂಕ್ತವಲ್ಲ. ರಾಜ್ಯ ಸರ್ಕಾರ ಇನ್ನೊಮ್ಮೆ ಮರುಪರುಶಲನೆ ಮಾಡಿ ಸುಮಾರು 80 ಲಕ್ಷ ರೂಪಾಯಿ ಭೂ ಪರಿಹಾರ ನೀಡಬೇಕು ಎಂದು ವಿಜಯಪುರದಲ್ಲಿ ಬುದುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಅಖಂಡ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.