ಉಡುಪಿ: ಕೋಟ ಹೋಬಳಿ ವ್ಯಾಪ್ತಿಯ ಹನೇಹಳ್ಳಿ ಗ್ರಾಮ ಪಂಚಾಯಿತಿಯ ಜನ ಸಂಪರ್ಕ ಸಭೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಬಾಗಿ
Udupi, Udupi | Sep 17, 2025 ಕೋಟ ಹೋಬಳಿ ವ್ಯಾಪ್ತಿಯ ಹನೇಹಳ್ಳಿ ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕ ಸಭೆ ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಅವರು ಗ್ರಾಮದ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಹನೇಹಳ್ಳಿ ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕಸಭೆಯನ್ನು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದು ಪ್ರತಿಯೊಂದು ಗ್ರಾಮ ಪಂಚಾಯಿತಿನಲ್ಲಿ ಕೂಡ ಮುಂದಿನ ದಿನಗಳಲ್ಲಿ ಜನ ಸಂಪರ್ಕ ಸಭೆಯನ್ನು ಮಾಡಿ ಜನರ ಕೆಲವೊಂದು ಸಮಸ್ಯೆಗಳಿಗೆ ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮತ್ತು ಪರಿಹರಿಸುವ ಭರವಸೆಯನ್ನು ಜನ ಸಂಪರ್ಕ ಸಭೆಯಲ್ಲಿ ತಿಳಿಸಲಾಯಿತು.