ಶಿರಸಿ: ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷರಾಗಿ ನಟರಾಜ ಹೊಸುರು ನೇಮಕ
ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷರಾಗಿ ಬದನಗೋಡ ಗ್ರಾಪಂ ಅಧ್ಯಕ್ಷ ನಟರಾಜ ಹೊಸುರು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಿಸಾನ್ ಕಾಂಗ್ರೆಸ್ ಮೂಲಕ ರೈತರನ್ನು ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಳ್ಳುವಂತೆ ಮಾಡಿ, ಸಕ್ರಿಯವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸೂಚನೆಯ ಮೇರೆಗೆ ಕಿಸಾನ್ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಬೀಗಾ ಆದೇಶ ಹೊರಡಿಸಿದ್ದಾರೆ.