ಮಂಡ್ಯದ ಸ್ವರ್ಣಸಂದ್ರದಲ್ಲಿ ನೂತನವಾಗಿ ನಿಮರ್ಾಣವಾಗಿರುವ ಕಾಳಮ್ಮ, ಮಾರಮ್ಮ ದೇವಸ್ಥಾನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪ್ರತಿಬಿಂಬವಾಗಿರುವ ದೇವಾಲಯಗಳ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದೆ. ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯು ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ ಎಂದರು. ನಂತರ ಕಳಸ ಪ್ರತಿಷ್ಟಾಪನೆಗೆ ಪೂಜೆ ಸಲ್ಲಿಸಿದರು. ಇದೇ ವೇಳೆ ಮಹಿಳೆಯರು ನಿಖಿಲ್ಕುಮಾರಸ್ವಾಮಿ ಅವರನ್ನು ಕೊಂ