ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಹಾಗೂ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಿ.ಸಿ. ಕ್ಯಾಮರಗಳ ಕಣ್ಗಾವಲು ವ್ಯವಸ್ಥೆ ಅಳವಡಿಸಲಾಗಿದೆ. ಗ್ರಾಮಪಂಚಾಯಿತಿಯ 15ನೇ ಹಣಕಾಸು ಯೋಜನೆಯ ಅನುದಾನದಡಿ ಗ್ರಾಮದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಸಿ.ಸಿ. ಕ್ಯಾಮರಗಳನ್ನು ಸ್ಥಾಪಿಸಲಾಗಿದೆ. ಈ ಕುರಿತು ಗ್ರಾಮಪಂಚಾಯಿತಿ ಅಧ್ಯಕ್ಷ ರಂಜತ್ ಕುಮಾರ್ ಅವರು ಮಾತನಾಡಿ, ಸಿ.ಸಿ. ಕ್ಯಾಮರಗಳ ಅಳವಡಿಕೆಯಿಂದ ಅಪರಾಧ ಚಟುವಟಿಕೆಗಳಿಗೆ ತಡೆ ಉಂಟಾಗುವುದರ ಜೊತೆಗೆ ಸಾರ್ವಜನಿಕರ ಭದ್ರತೆ ಹೆಚ್ಚಾಗಲಿದೆ ಎಂದರು.