ಉಡುಪಿ: ನಿಟ್ಟೂರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ, ಬೈಕ್ ಸವಾರ ಸಾವು
Udupi, Udupi | Mar 8, 2024 ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಮಾ.8ರಂದು ಮುಂಜಾನೆ 4 ಗಂಟೆಗೆ ನಡೆದಿದೆ.ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ 4 ಗಂಟೆ ವೇಳೆ ತಮ್ಮ ಬೈಕ್‌ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.