ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 128 ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ(73)ದ ವಾರ್ಡ್ ನಂ 42 ರ ಭೂತ್ ನಂ 32 ನಲ್ಲಿರುವ ಬೆಂಗೇರಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಕೆ ಎಲ್ ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿ, ಭಾಜಪಾ ಸೆಂಟ್ರಲ್ ಮಂಡಲ ಅಧ್ಯಕ್ಷರಾದ ರಾಜು ಕಾಳೆ ಸೇರಿದಂತೆ ಉಪಸ್ಥಿತರಿದ್ದರು.