ಚಿತ್ರದುರ್ಗದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಬಿಸಿನೆಸ್ ಡೆವೆಲಪ್ಮೆಂಟ್ ಸರ್ವಿಸ್ ಪ್ರೊವೈಡರ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಟೆಕ್ಸಾಕ್ ವತಿಯಿಂದ ಈಚೆಗೆ ಕೇಂದ್ರ ಸರ್ಕಾರದ ಯೋಜನೆಯಾದ ಆರ್ಎಎಂಪಿ ಯೋಜನೆಯಡಿ ಒಂದು ದಿನದ ಬಿಸಿನೆಸ್ ಡೆವೆಲಪ್ಮೆಂಟ್ ಸರ್ವಿಸ್ ಪ್ರೊವೈಡರ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್ ಅವರು ಕಾರ್ಯಕ್ರಮ ಉದ್ದೇಶಿಸಿದ್ದಾರೆ.