ಶಿರಸಿ: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಜೀವ ಬೆದರಿಕೆ ಪ್ರಕರಣ ದಾಖಲು; ನಗರದ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಜಿಲ್ಲೆಯ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಇ-ಮೇಲ್ ಮೂಲಕ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಬಗ್ಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ, ಸುರೇಶ್ ಶೆಟ್ಟಿ ಅವರು ಶುಕ್ರವಾರ ಸಂಜೆ 5 ಗಂಟೆಗೆ ನಗರದ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿಂದೆಯೂ ಸಹ ಅವರಿಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ದೂರು ದಾಖಲಿಸಿದ್ದಾರೆ.