ಮಂಡ್ಯ: ಫೇಸ್ಬುಕ್ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
Mandya, Mandya | Dec 13, 2025 ಫೇಸ್ ಬುಕ್ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ ಪೊಲೀಸರಿಗೆ ದೂರು ನೀಡಿದ್ದು, ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಶಂಕಿಸಲಾಗಿದೆ. ಫೇಸ್ಬುಕ್ನಲ್ಲಿ ಪರಿಚಯವಾದ ಯುವತಿ ಭೇಟಿಗಾಗಿ ಮಂಡ್ಯದಿಂದ ಮಡಿಕೇರಿಗೆ ಬಂದಿದ್ದ ಯುವಕ ಅಕ್ಷರಶಃ ನರಕ ನೋಡಿದ್ದಾನೆ. ಮಡಿಕೇರಿಗೆ ಬಂದಿದ್ದ ಯುವಕನನ್ನು ಮನೆಯೊಂದರಲ್ಲಿ ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹದೇವ್ ಶುಕ್ರವಾರ ಸಂಜೆ ಮಡಿಕೇರಿಗೆ ಬಂದಿದ್ದಾನೆ. ಮಹದೇವ್ಗೆ ಫೇಸ್ಬುಕ್ನಲ್ಲಿ