ಅಜ್ಜಂಪುರ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಅಜ್ಜಂಪುರ ಪೊಲೀಸರು.!
ಪ್ರಿಯಕರನೊಂದಿಗೆ ಸೇರಿ ಸೊಸೆಯೇ ಅತ್ತೆಗೆ ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಕೆಯನ್ನ ನಡೆಸಿದ ಅಜ್ಜಂಪುರ ಠಾಣೆಯ ಪೊಲೀಸರು ಬಂಧಿತ ಆರೋಪಿಗಳಿಂದ 36 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ..