ಮಂಚೇನಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ಸುಧಾಕರ್
Manchenahalli, Chikkaballapur | Sep 17, 2025
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ನಿರ್ಮಾಣಗೊಂಡಿರುವ ನೂತನ ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. 15-20 ವರ್ಷಗಳ ಹಿಂದೆ ಘೋಷಣೆಯಾದ ತಾಲ್ಲೂಕುಗಳಲ್ಲೇ ಇನ್ನೂ ಅನೇಕ ಕಡೆ ಆಸ್ಪತ್ರೆಗಳು ನಿರ್ಮಾಣವಾಗಿಲ್ಲ. ಅಂತಹುದರಲ್ಲಿ ಈ ಹಿಂದೆ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ 2019ರಲ್ಲಿ ಮಂಚೇನಹಳ್ಳಿ ತಾಲ್ಲೂಕು ಘೋಷಣೆ ಮಾಡಿಸಿ, ಮುಂದಿನ 2-3 ವರ್ಷಗಳ ಬಜೆಟ್ ನಲ್ಲಿ ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸುಮಾರು 40 ಕೋಟಿ ರೂಪಾಯಿ ಅನುದಾನ ತಂದಿದ್ದೆ. ಬಹುತೇಕ ಪೂರ್ಣಗೊಂಡಿರುವ ಈ ಕಟ್ಟಡಗಳನ್ನು ಆದಷ್ಟು ಬೇಗ ಲೋಕಾರ್ಪಣೆ ಮಾಡಿ ಅಗತ್ಯ ತರಿಸಿ ವೈದ್ಯರು,