ಹಳಿಯಾಳ : ಹಾವೇರಿಯಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶಿರಸಿ ವಿಭಾಗದಿಂದ ಹಳಿಯಾಳ ಪಟ್ಟಣದ ಮಿಲಾಗ್ರಿಸ್ ಶಾಲೆಯ ಮಕ್ಕಳಾದ ರಾಘವ್ ರಾಜಶೇಖರ್ ಪಾಟೀಲ್ ಮತ್ತು ಸ್ನೇಹಿತ ಸಂಜು ಮೋರೆ ಇವರು 14 ವರ್ಷದ ವಿಭಾಗದಲ್ಲಿ ಭಾಗವಹಿಸಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬುಧವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಈ ಇಬ್ಬರು ವಿದ್ಯಾರ್ಥಿಗಳು ಹಳಿಯಾಳದ ಕ್ರೀಡಾ ಭವನದಲ್ಲಿ ಉದಯ ಜಾದವ್ ಇವರ ಬಳಿ ತರಬೇತಿ ಪಡೆಯುತ್ತಿದ್ದು. ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಹಳಿಯಾಳ ತಾಲೂಕಿಗೆ ಮತ್ತು ಕ್ರೀಡಾ ಭವನಕ್ಕೆ ಕೀರ್ತಿಯನ್ನು ತಂದಿದ್ದಾರೆ.