ತಾಲ್ಲೂಕು ಆಡಳಿತದಿಂದ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆಗೆ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ವಹಿಸಿ ಮಾತನಾಡಿದ ಅವರು, ಚುನಾವಣೆ ಇರುವುದರಿಂದ ಜಯಂತಿಯನ್ನು ಸರಳವಾಗಿ ತಾಲ್ಲೂಕು ಕಚೇರಿಯಲ್ಲಿ ಏಪ್ರಿಲ್ 5ರಂದು ಆಚರಿಸಲಾಗುವುದು, ಸಮಾಜದ ಎಲ್ಲಾ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ್, ಆದಿ ಜಾಂಬವ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಮಹಾದೇವ ಕಾಳಯ್ಯ, ಎಂ.ಎಸ್.ರವಿಕುಮಾರ್ ಇದ್ದರು.