ವಿಜಯನಗರದ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಕಾರು ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದರೂ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.