ಶಿರಸಿ: ಶೀಘ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ : ಬನವಾಸಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಬರ್ಟ ದದ್ದಾಪುರಿ
ಶಿರಸಿ : ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ. ಕಾರಣ ಚುನಾವಣೆ ಪೂರ್ವ ಪಕ್ಷದ ಬ್ಲಾಕ್ ನ ಎಲ್ಲ ಪದಾಧಿಕಾರಿಗಳ ಸ್ಥಾನದಲ್ಲಿ ಸಕ್ರಿಯ ಸದಸ್ಯರನ್ನು ನೇಮಿಸುವ ಕಾರ್ಯ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ ಹೇಳಿದರು. ತಾಲೂಕಿನ ಬನವಾಸಿಯಲ್ಲಿ ಶುಕ್ರವಾರ ನೂತನ ಬ್ಲಾಕ್ ಅಧ್ಯಕ್ಷ ಗಣಪತಿ ನಾಯ್ಕ ಅವರಿಗೆ ಅಧಿಕಾರ ಹಸ್ತಾಂತರಿಸಿ ಅವರು ಮಾತನಾಡಿದ ಅವರು, ನೂತನ ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಕ್ಷ ಸಂಘಟನೆಯಲ್ಲಿ ತಕ್ಷಣ ತೊಡಗಿಕೊಳ್ಳಬೇಕು ಎಂದರು.