ಔರಾದ್: ಪಟ್ಟಣದಲ್ಲಿ ಪಾಲಿಟೆಕ್ನಿಕ್ ಕಾಲೇಜು ನೂತನ ಕಟ್ಟಡ ಪರಿಶೀಲಿಸಿದ ಶಾಸಕ ಪ್ರಭು ಚೌಹಾಣ್
Aurad, Bidar | Nov 29, 2025 ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಅವರು ಶನಿವಾರ ಮಧ್ಯಾಹ್ನ 12:30 ಕ್ಕೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಪಾಲಿಟೆಕ್ನಿಕ್ ಕಾಲೇಜು ಕಟ್ಟಡವನ್ನು ಪರಿಶೀಲಿಸಿದರು. ಈ ವೇಳೆ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳುವಂತೆ ಸಲಹೆ ನೀಡಿದರು ಜೊತೆಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಸಮಸ್ಯೆ ಉದ್ಭವ ಆದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.