ಭದ್ರಾವತಿ: ಸುರುಗಿ ತೋಪಿನಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ, ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಉದ್ಘಾಟನೆ
ಸುರುಗಿ ತೋಪಿನಲ್ಲಿ ನೂತನವಾಗಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದ್ದು, ನಗರಸಭಾ ಅಧ್ಯಕ್ಷ್ಯೆ ಲತಾ ಚಂದ್ರಶೇಖರ್ ಕಟ್ಟಡವನ್ನು ಉದ್ಘಾಟಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಾಂತರಾಜ್, ಕಾಂಗ್ರೆಸ್ ಮುಖಂಡರಾದ ಬದ್ರಿ ನಾರಾಯಣ, ನಗರಸಭಾ ಅಧಿಕಾರಿಗಳು, ಸ್ಥಳೀಯ ಮುಖಂಡರು, ಮಹಿಳೆಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಣ್ಯರಿಗೆ ಸ್ಥಳೀಯರಿಂದ ಸನ್ಮಾನಿಸಿ ಗೌರವಿಸಲಾಯಿತು.