ಬನೋಶಿ ಗ್ರಾಮದ ದಲಿತ ಬಾಲಕಿ ಅತ್ಯಾಚಾರ ಖಂಡಿಸಿ ಹಿರಿಯೂರು ತಹಶಿಲ್ದಾರ್ ಗೆ ಮನವಿ ಸಲ್ಲಿಸಲಾಯಿತು. ಗುರುವಾರ ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಹಿರಿಯೂರು ತಾಲೂಕು ಸಮಿತಿ ವತಿಯಿಂದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿ ಬಸಮ್ಮ ಮಾನಪ್ಪ ಚಲವಾದಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಇವರುಗಳನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಮತ್ತು ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದ್ದಾರೆ