ಡಿ.11, ಗುರುವಾರ ಮಧ್ಯಾಹ್ನ 12ಕ್ಕೆ ಕಂಪ್ಲಿ ನಗರದ ಸಂತೆ ಮಾರುಕಟ್ಟೆ ಬಳಿ ನೂತನವಾಗಿ ನಿರ್ಮಿಸಲಾದ ಒನಕೆ ಓಬವ್ವ ರವರ ವೃತ್ತವನ್ನು ಕಂಪ್ಲಿ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಕಾಂಬ್ಳೆ ರವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಒನಕೆ ಓಬವ್ವಳ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜರಗಿತು. ಮೆರವಣಿಗೆಯಲ್ಲಿ ದಲಿತ ಮುಖಂಡರು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷತೆ ನೀಡಿದರು.