ಗುಂಡ್ಲುಪೇಟೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಮುಂಭಾಗದಲ್ಲಿ ಕೆಎಸ್ಆರ್ಟಿಸಿ ಚಾಲಕನ ಅನುಚಿತ ವರ್ತನೆ ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದರು. ಪಟ್ಟಣದ ರಮೇಶ್ ಎಂಬುವವರು ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ಸಂಧರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ವೇಗವಾಗಿ ಬಂದ ಬಸ್ ಚಾಲಕನನ್ನು ದ್ವಿಚಕ್ರ ವಾಹನ ಸವಾರ ಪ್ರಶ್ನಿಸಿ, ಪಟ್ಟಣ ವ್ಯಾಪ್ತಿಯಲ್ಲಿ ನಿಧಾನವಾಗಿ ಚಾಲನೆ ಮಾಡಬೇಕು. ಅತಿ ವೇಗದಿಂದ ಬಂದು ದ್ವಿಚಕ್ರ ವಾಹನ ಸವಾರರ ಜೀವಕ್ಕೆ ತೊಂದರೆಯಾದರೆ ಯಾರು ಹೊಣೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.