ರಾಮದುರ್ಗ: ಗೀತಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಒತ್ತಾಯಿಸಿ ನಗರದಲ್ಲಿ ಗವಳಿ ಸಮಾಜದವರು ಪ್ರತಿಭಟನೆ
ಗೀತಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಒತ್ತಾಯಿಸಿ ಗವಳಿ ಸಮಾಜದವರು ಪ್ರತಿಭಟನೆ ನಡೆಸಿದರು. ಮನೆ ಕೆಲಸಕ್ಕೆ ತೆರಳುತ್ತಿದ್ದ ಗೀತಾ ಅವರನ್ನು ಅವರ ಗಂಡನ ಅಣ್ಣನೇ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ರೌಡಿ ಶೀಟರ್ ಆಗಿರುವ ಆರೋಪಿಗೆ ಗಲ್ಲು ಶಿಕ್ಷೆ ನೀಡಿ, ಗೀತಾ ಕುಟುಂಬಕ್ಕಗೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಸೋಮವಾರ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಮಂಗಳವಾರಪೇಟೆಯ ನಿವಾಸಿ ಗೀತಾ ಗವಳಿ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಗಣೇಶ ಗವಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಗವಳಿ ಸಮಾಜದವರು ಪ್ರತಿಭಟನೆ ನಡೆಸಿದರು.