ಎಂ ಎಲ್ ಸಿ ಡಿ.ಟಿ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಕಾಡುಗೊಲ್ಲ ಸಮುದಾಯದ ವತಿಯಿಂದ ಆಗ್ರಹ ಮಾಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಸಮುದಾಯದ ಸಭೆ ನಡೆಸಿ ಆಗ್ರಹ ಮಾಡಿದ್ದಾರೆ. ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆಯುಳ್ಳ ಕಾಡುಗೊಲ್ಲ, ಗೊಲ್ಲ,ಯಾದವ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಅವಕಾಶ ನೀಡಲು ಎಂಎಲ್ ಸಿ ಡಿ.ಟಿ ಶ್ರೀನಿವಾಸ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಹೊಳಲ್ಕೆರೆ ತಾಲೂಕು ಗೊಲ್ಲ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಇವರಿಗೆ ಮನವಿ ಮಾಡಿದ್ದಾರೆ