ಹನೂರು: ಅಪ್ರಾಪ್ತ ಬಾಲಕಿಗೆ ಮದುವೆ, ಗರ್ಭಧಾರಣೆ: ಐವರ
ವಿರುದ್ಧ ರಾಮಾಪುರ ಠಾಣೆಯಲ್ಲಿ ಎಫ್ ಐ ಆರ್
ಹನೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಐದು ಜನರ ಮೇಲೆ ಪ್ರಕರಣ ದಾಖಲಾಗಿದೆ. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸತ್ಯಮಂಗಲ ಗ್ರಾಮದ ಗಿರಿ ಮಂಜ, ಅಪ್ರಾಪ್ತ ಬಾಲಕಿಯ ಚಿಕ್ಕಪ್ಪ, ನಾಗಮಾದ, ಸಣ್ಣತಾಯಿ, ಮಣಿ ವಿರುದ್ಧ ಪ್ರಕರಣ ದಾಖಲಾಗಿದೆ. ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಗಿರಿಮಂಜ ಎಂಬ ಯುವಕ ಪ್ರೀತಿಸಿ ಮದುವೆಯಾಗಿದ್ದ. ಇದೀಗ ಎರಡು ತಿಂಗಳ ಗರ್ಭಿಣಿಯಾಗಿದ್ದ ಹಿನ್ನೆಲೆ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋಗಿದ್ದಾಗ ವೈದ್ಯಾಧಿಕಾರಿಗಳು ಮಕ್ಕಳ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ