ಶಿರಸಿ: ತಾಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತಾಲೂಕಾ ಗ್ಯಾರಂಟಿ ಯೋಜನಾ ಪ್ರಗತಿ ಪರಿಶೀಲನಾ ಸಭೆ
ಶಿರಸಿ: ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ತಾಲೂಕಾ ಗ್ಯಾರೆಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಮಾ ಉಗ್ರಾಣಕರ ಎಚ್ಚರಿಸಿದರು. ಶುಕ್ರವಾರ ನಗರದ ತಾಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತಾಲೂಕಾ ಗ್ಯಾರೆಂಟಿ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗಿಸಲು ಬದಲು ಅನಗತ್ಯ ಕಾರಣ ನೀಡಿ, ತೊಂದರೆ ನೀಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.